Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:23 - ಕನ್ನಡ ಸತ್ಯವೇದವು C.L. Bible (BSI)

23 ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನು ಈ ದೀಪಸ್ತಂಭಕ್ಕೆ ಏಳು ಹಣತೆಗಳನ್ನು ಮಾಡಿದನು; ಬಳಿಕ ಅಪ್ಪಟ ಬಂಗಾರದಿಂದ ಬತ್ತಿಗಳನ್ನು ಸರಿಪಡಿಸುವ ಕತ್ತರಿಗಳನ್ನೂ ಹರಿವಾಣಗಳನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಏಳು ದೀಪಗಳನ್ನೂ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:23
11 ತಿಳಿವುಗಳ ಹೋಲಿಕೆ  

ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ.


“ಏನನ್ನು ನೋಡುತ್ತಿರುವೆ?” ಎಂದು ಅವನು ನನ್ನನ್ನು ಕೇಳಿದಾಗ ನಾನು, “ಇಗೋ, ಏಳು ದೀಪಗಳುಳ್ಳ ಸುವರ್ಣಮಯ ದೀಪಸ್ತಂಭವೊಂದನ್ನು ನೋಡುತ್ತಿದ್ದೇನೆ. ಅದರ ಮೇಲ್ಗಡೆ ಎಣ್ಣೆಯ ಪಾತ್ರೆ ಇದೆ. ಅದರ ಮೇಲೆ ದೀಪಗಳಿಗೆ ಏಳು ನಾಳಗಳಿವೆ.


“ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು.


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು.


ದೀಪದ ಕುಡಿ ತೆಗೆಯುವ ಕತ್ತರಿಗಳನ್ನೂ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಿಸಬೇಕು.


ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು.


ದೀಪವೃಕ್ಷವೂ ಅದರ ಎಲ್ಲಾ ಉಪಕರಣಗಳೂ ಮೂವತ್ತೈದು ಕಿಲೋಗ್ರಾಂ ಚೊಕ್ಕಬಂಗಾರದವುಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು