Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:25 - ಕನ್ನಡ ಸತ್ಯವೇದವು C.L. Bible (BSI)

25 ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವನು ಧೂಪವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಧೂಪವೇದಿಕೆಯು ಚೌಕವಾಗಿತ್ತು. ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಎರಡು ಮೊಳ ಎತ್ತರ ಇತ್ತು. ಧೂಪವೇದಿಕೆಯಲ್ಲಿ ನಾಲ್ಕು ಕೊಂಬುಗಳಿದ್ದವು. ಪ್ರತಿ ಮೂಲೆಯಲ್ಲಿಯೂ ಒಂದೊಂದು ಕೊಂಬುಗಳಿದ್ದವು. ಈ ಕೊಂಬುಗಳು ಒಟ್ಟಾಗಿ ಧೂಪವೇದಿಕೆಗೆ ಜೋಡಿಸಲ್ಪಟ್ಟು ಅವಿಭಾಜ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಿದರು. ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿತ್ತು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:25
15 ತಿಳಿವುಗಳ ಹೋಲಿಕೆ  

ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ.


ದೃಷ್ಟಿಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ?


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು.


ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.


ಮೇಜು, ಅದರ ಉಪಕರಣಗಳು, ಚೊಕ್ಕಬಂಗಾರದ ದೀಪವೃಕ್ಷ, ಅದರ ಉಪಕರಣಗಳು,


ದೀಪವೃಕ್ಷವೂ ಅದರ ಎಲ್ಲಾ ಉಪಕರಣಗಳೂ ಮೂವತ್ತೈದು ಕಿಲೋಗ್ರಾಂ ಚೊಕ್ಕಬಂಗಾರದವುಗಳಾಗಿದ್ದವು.


ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿದನು.


ಅಭಿಷೇಕ ತೈಲ, ಪರಿಮಳ ದ್ರವ್ಯ, ಗುಡಾರದ ಬಾಗಿಲಿನ ಪರದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು