Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:29 - ಕನ್ನಡ ಸತ್ಯವೇದವು C.L. Bible (BSI)

29 ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:29
18 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ವೇದಿಕೆಯನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.


ಇದೂ ಅಲ್ಲದೆ ಸರ್ವೇಶ್ವರ ಮೋಶೆಗೆ ಇಂತೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು