Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:1 - ಕನ್ನಡ ಸತ್ಯವೇದವು C.L. Bible (BSI)

1 ಅವನು ಬಲಿಪೀಠವನ್ನು ಜಾಲಿಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವನು ಯಜ್ಞವೇದಿಯನ್ನು ಜಾಲೀಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:1
19 ತಿಳಿವುಗಳ ಹೋಲಿಕೆ  

ಆ ನಗರ ಚಚ್ಚೌಕವಾಗಿತ್ತು. ಅದರ ಚದರ ಅಳತೆ 2,400 ಕಿಲೊಮೀಟರುಗಳಷ್ಟಿತ್ತು.


ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ.


ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,


ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.


ದೇವದರ್ಶನದ ಗುಡಾರದ ಬಾಗಿಲಿನ ಮುಂದುಗಡೆಯಲ್ಲಿ ಬಲಿಪೀಠವನ್ನು ಇಡು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,


ಧೂಪವೇದಿಕೆ, ಬಲಿಪೀಠ, ಅದರ ಉಪಕರಣಗಳು,


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬೆಗಳನ್ನು ಮಾಡಿದನು; ಅವು ಬಲಿಪೀಠದ ಅಂಗಾಂಗಗಳಾಗಿದ್ದವು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಿದನು.


ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು.


ಸರ್ವೇಶ್ವರ ಮೋಶೆಗೆ ಮತ್ತೆ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು