Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:21 - ಕನ್ನಡ ಸತ್ಯವೇದವು C.L. Bible (BSI)

21 ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:21
31 ತಿಳಿವುಗಳ ಹೋಲಿಕೆ  

“ದೇವಪ್ರಸನ್ನತೆಯ ಗುಡಾರವು ನಮ್ಮ ಪೂರ್ವಜರ ಬಳಿ ಮರಳುಗಾಡಿನಲ್ಲಿತ್ತು. ಮೋಶೆಯೊಡನೆ ಮಾತನಾಡಿದ ದೇವರು ಅವನಿಗಿತ್ತ ಆಜ್ಞೆಯಂತೆ ಹಾಗೂ ತೋರಿಸಿದ ಆಕಾರದಂತೆ ಅದನ್ನು ನಿರ್ಮಿಸಲಾಗಿತ್ತು.


ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?


ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.


ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆದ ಎಲೀಶೇಬಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು ಹುಟ್ಟಿದರು.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ನಾನು ಈ ದೇಹವೆಂಬ ಗುಡಾರದಲ್ಲಿ ಜೀವಿಸಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ, ಪ್ರೋತ್ಸಾಹಿಸುವುದು ಉಚಿತವೆಂದು ಎಣಿಸಿದ್ದೇನೆ.


ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.


ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಆಗ ಪೇತ್ರನು ಯೇಸುವಿಗೆ, “ಪ್ರಭೂ, ನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದು! ಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ತಮಗೊಂದು, ಮೋಶೆಗೊಂದು, ಎಲೀಯನಿಗೊಂದು,” ಎಂದನು.


ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II


ಆಗ ಯೋಬನು ಹೀಗೆ ಉತ್ತರಕೊಟ್ಟನು:


ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.


ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.


ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.


ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು.


ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.


ಗುಡಾರದ ಗೂಟಗಳೂ ಅಂಗಳದ ಗೂಟಗಳೂ ಎಲ್ಲಾ ತಾಮ್ರದವುಗಳು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವನು ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು