Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:23 - ಕನ್ನಡ ಸತ್ಯವೇದವು C.L. Bible (BSI)

23 ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು. ಇವನು ಶಿಲ್ಪಕಲೆ ಬಲ್ಲವನು. ಕಲಾತ್ಮಕ ಕೆಲಸವನ್ನು ನಿಯೋಜಿಸುವವನು ಮತ್ತು ನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸಮಾಡುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆ ಬಲ್ಲವನೂ ವಿಚಿತ್ರವಾದ ಕೆಲಸವನ್ನು ಕಲ್ಪಿಸುವವನೂ ನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ನೂಲಿನಿಂದ ಬುಟೇದಾರೀ ಕೆಲಸಮಾಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:23
6 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೆ ಮತ್ತು ದಾನ್‍ಕುಲದ ಅಹೀಸಾಮಾಕನ ಮಗ ಒಹೋಲೀಯಾಬನಿಗೆ ವಿಶೇಷ ವರವನ್ನು ಕೊಟ್ಟಿದ್ದಾರೆ.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.


ನೀಲಿ, ಊದ ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಮಡಿಗಳು, ತುಪ್ಪಟದ ಬಟ್ಟೆಗಳು,


ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ, ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ತೆರೆಯನ್ನು ಮಾಡಿಸಬೇಕು.


“ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;


“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು