Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:9 - ಕನ್ನಡ ಸತ್ಯವೇದವು C.L. Bible (BSI)

9 ಗುಡಾರಕ್ಕೆ ಅಂಗಳವನ್ನೂ ಮಾಡಿದನು. ಆ ಅಂಗಳದ ದಕ್ಷಿಣದ ಕಡೆಯಲ್ಲಿ ಇದ್ದ ತೆರೆಗಳನ್ನು ಹುರಿನಾರಿನ ಬಟ್ಟೆಯಿಂದ ಮಾಡಲಾಗಿತ್ತು. ಅವು ನೂರು ಮೊಳ ಉದ್ದವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗುಡಾರಕ್ಕೆ ಅಂಗಳವನ್ನು ಮಾಡಿದನು. ಆ ಅಂಗಳದ ತೆಂಕಣ ಕಡೆಯಲ್ಲಿ ಇದ್ದ ತೆರೆಗಳು ಹುರಿನಾರಿನ ಬಟ್ಟೆಯಿಂದ ಉಂಟಾಗಿ ನೂರು ಮೊಳ ಉದ್ದವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಗುಡಾರದ ಅಂಗಳವನ್ನು ಮಾಡಿದರು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಲಾಗಿತ್ತು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:9
13 ತಿಳಿವುಗಳ ಹೋಲಿಕೆ  

ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II


ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.


ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.


ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ತೂಗುಬಿಡು.


“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ಆ ಕಡೆಯಲ್ಲಿ ಇಪ್ಪತ್ತು ಕಂಬಗಳೂ ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.


ಗುಡಾರದ ಮತ್ತು ಬಲಿಪೀಠದ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆ, ಹಗ್ಗಗಳು ಮತ್ತು ಅವುಗಳ ಎಲ್ಲ ಉಪಕರಣಗಳು, ಇವುಗಳನ್ನು ಹೊರಬೇಕು; ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲ ಕೆಲಸಗಳನ್ನು ಅವರೇ ಮಾಡಬೇಕು.


ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂಥ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು