Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗ ಆಜ್ಞಾಪಿಸಿದಂತೆ ಆ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನು ಮತ್ತು ಆರೋನನಿಗೆ ದೀಕ್ಷಾವಸ್ತ್ರಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಆರೋನನಿಗೆ ದೀಕ್ಷಾವಸ್ತ್ರಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾಜಕರು ಯೆಹೋವನ ಪವಿತ್ರಸ್ಥಳದಲ್ಲಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:1
14 ತಿಳಿವುಗಳ ಹೋಲಿಕೆ  

ನೀರಿನ ತೊಟ್ಟಿ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕ ವಸ್ತ್ರಗಳು,


ಯಾರಲ್ಲಿ ನೀಲಿ, ಧೂಮ, ಹಾಗು ರಕ್ತವರ್ಣಗಳುಳ್ಳ ದಾರಗಳು, ನಯವಾದ ನಾರುಬಟ್ಟೆ, ಆಡುಕೂದಲಿನ ಬಟ್ಟೆ, ಹದಮಾಡಿದ ಕೆಂಪುಬಣ್ಣದ ಕುರಿದೊಗಲು ಹಾಗು ಕಡಲುಹಂದಿಯ ತೊಗಲು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.


ಪವಿತ್ರಸ್ಥಾನದ ಸೇವೆಗೆ ಸುಂದರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೆ ಹಾಗು ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳು.”


ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ, ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.


“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ನೀಲಿ, ಊದ ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಮಡಿಗಳು, ತುಪ್ಪಟದ ಬಟ್ಟೆಗಳು,


ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನು, ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.


ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರವನ್ನು ಮತ್ತು ನಾರಿನಬಟ್ಟೆಯನ್ನು ಈ ವಸ್ತ್ರಗಳನ್ನು ತಯಾರಿಸಲು ಉಪಯೋಗಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು