Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:15 - ಕನ್ನಡ ಸತ್ಯವೇದವು C.L. Bible (BSI)

15 ವಕ್ಷಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎದೆಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ನೇಯ್ಗೆಯ ಕೆಲಸದಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ದೈವನಿರ್ಣಯಪದಕಕ್ಕೆ ಅಪ್ಪಟ ಬಂಗಾರದ ಸರಪಣಿಗಳನ್ನು ಹುರಿಗಳಂತಿರುವ ಹಗ್ಗದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:15
9 ತಿಳಿವುಗಳ ಹೋಲಿಕೆ  

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!


ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದಲೂ ಆ ಹಲಗೆಗಳನ್ನು ತೋರಣ, ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕ ಬಂಗಾರದ ತಗಡಿನಿಂದಲೂ ಹೊದಿಸಿ, ಅದನ್ನು ರತ್ನಗಳಿಂದ ಅಲಂಕರಿಸಿದನು.


ಅಲ್ಲದೇ ಹೆಣೆಗೇ ಕೆಲಸದಿಂದ ಹುರಿಗಳಂತಿರುವ ಎರಡು ಅಪ್ಪಟ ಬಂಗಾರದ ಸರಪಣಿಗಳನ್ನು ಮಾಡಿಸಿ ಆ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.


ಇಸ್ರಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಲಾಗಿತ್ತು.


ಎರಡು ಚಿನ್ನದ ಜವೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಫಲಕದ ಎರಡು ಮೂಲೆಗಳಲ್ಲಿ ತಗಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು