Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:31 - ಕನ್ನಡ ಸತ್ಯವೇದವು C.L. Bible (BSI)

31 ಅದನ್ನು ಪೇಟಕ್ಕೆ ಬಿಗಿಸುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅದನ್ನು ಮುಂಡಾಸಕ್ಕೆ ಬಿಗಿಸುವದಕ್ಕಾಗಿ ನೀಲಿದಾರವನ್ನು ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ಚಿನ್ನದ ಪಟ್ಟಿಯನ್ನು ದಾರಕ್ಕೆ ಬಿಗಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಈ ನೀಲಿ ದಾರವನ್ನು ಮುಂಡಾಸಕ್ಕೆ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದು ಮುಂಡಾಸದ ಮುಂಭಾಗದಲ್ಲಿರುವಂತೆ ಅದನ್ನು ನೀಲಿ ದಾರಿನಿಂದ ಕಟ್ಟಿಸಿದರು. ಇದನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:31
5 ತಿಳಿವುಗಳ ಹೋಲಿಕೆ  

ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.


“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.


ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ಸರ್ವೇಶ್ವರ ಹೇಳಿದಂತೆಯೇ ಮೋಶೆ ಮಾಡಿದನು. ಜನರೆಲ್ಲರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು