Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:42 - ಕನ್ನಡ ಸತ್ಯವೇದವು C.L. Bible (BSI)

42 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಇಸ್ರಯೇಲರು ಆ ಕೆಲಸವನ್ನೆಲ್ಲಾ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಆ ಕೆಲಸಗಳನ್ನೆಲ್ಲಾ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲ್ಯರು ಆ ಕೆಲಸವನ್ನೆಲ್ಲಾ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಇವುಗಳನ್ನೆಲ್ಲಾ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಇಸ್ರಾಯೇಲರು ಈ ಕೆಲಸಗಳನ್ನೆಲ್ಲಾ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:42
15 ತಿಳಿವುಗಳ ಹೋಲಿಕೆ  

“ನಿಮ್ಮಲ್ಲಿರುವ ಶಿಲ್ಪಕಾರರೆಲ್ಲರು ಬಂದು ಸರ್ವೇಶ್ವರನು ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ, ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು