Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:43 - ಕನ್ನಡ ಸತ್ಯವೇದವು C.L. Bible (BSI)

43 ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಮೋಶೆಯು ಎಲ್ಲಾ ಕೆಲಸವನ್ನು ಸೂಕ್ಷ್ಮವಾಗಿ ಪರೀಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಎಲ್ಲವೂ ಮಾಡಲ್ಪಟ್ಟಿದ್ದರಿಂದ ಮೋಶೆ ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ, ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:43
24 ತಿಳಿವುಗಳ ಹೋಲಿಕೆ  

ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.


ಸ್ವಾಮಿದೇವನ ಮಹಿಮೆಯಿರಲಿ ಶಾಶ್ವತವಾಗಿ I ಆತ ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II


ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು.


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ಮತ್ತು ಸ್ವಂತ ಇಚ್ಛೆಯಿಂದ ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಬಲಿಹೋಮಗಳ ಅರ್ಪಣೆ ಮುಗಿದ ತರುವಾಯ ದಾವೀದನು ಸರ್ವೇಶ್ವರನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅವರೆಲ್ಲರಿಗೂ ಪ್ರಸಾದವನ್ನು ಹಂಚಿದನು:


ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಇಸ್ರಯೇಲರು ಆ ಕೆಲಸವನ್ನೆಲ್ಲಾ ಮಾಡಿದ್ದರು.


ಸರ್ವೇಶ್ವರ ಸ್ವಾಮಿ ಮೋಶೆಗೆ:


ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.


ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ನಾನು ನಿಮಗೆ ತೋರಿಸುವ ಮಾದರಿಯ ಪ್ರಕಾರವೇ ಆ ಗುಡಾರವನ್ನೂ ಅದರಲ್ಲಿನ ಎಲ್ಲ ಸಾಮಾಗ್ರಿಗಳನ್ನೂ ಮಾಡಿಸಬೇಕು.


ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


(ಮೋಶೆ ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಪಾಲನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಜೋರ್ಡನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು). ಯೆಹೋಶುವ ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳಿಸುವಾಗ ಅವರಿಗೆ,


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಇಸ್ರಯೇಲ್ ಸರ್ವಸಮಾಜದವರನ್ನು ಆಶೀರ್ವದಿಸುತ್ತಾ ಗಟ್ಟಿಯಾಗಿ ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು