Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:6 - ಕನ್ನಡ ಸತ್ಯವೇದವು C.L. Bible (BSI)

6 ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ ಎರಡು ಗೋಮೇಧಕ ರತ್ನಗಳಲ್ಲಿ ಇಸ್ರಯೇಲರ ಹನ್ನೆರಡು ಕುಲಗಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ [ಎರಡು] ಗೋಮೇಧಕರತ್ನಗಳಲ್ಲಿ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲಸಗಾರರು ಗೋಮೇಧಕ ರತ್ನಗಳನ್ನು ಏಫೋದಿನೊಳಗೆ ಚಿನ್ನದ ಕುಂದಣದಲ್ಲಿ ಇಟ್ಟರು. ಈ ರತ್ನಗಳಲ್ಲಿ ಇಸ್ರೇಲರ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮುದ್ರೆ ಕೆತ್ತುವ ಪ್ರಕಾರ, ಗೋಮೇಧಿಕ ರತ್ನಗಳಲ್ಲಿ ಹನ್ನೆರಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿ ಬಂಗಾರದ ಕುಂದಣದಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:6
8 ತಿಳಿವುಗಳ ಹೋಲಿಕೆ  

ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.


ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.


ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.


ಮಹಾಯಾಜಕನ ಕವಚಕ್ಕೆ ಬೇಕಾದ ರತ್ನಗಳು ಮತ್ತು ವಕ್ಷಪದಕದಲ್ಲಿ ಖಚಿಸಬೇಕಾದ ನಾನಾ ರತ್ನಗಳು.


ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು.


ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.


ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.


ಕವಚದ ಮೇಲಿದ್ದ ಅಪೂರ್ವವಾದ ಕಸೂತಿ ನಡುಕಟ್ಟು ಕವಚಕ್ಕೆ ಅಂಗವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ, ಚಿನ್ನದ ದಾರದಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲು ತಯಾರಿಸಲಾಗಿತ್ತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು