Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:7 - ಕನ್ನಡ ಸತ್ಯವೇದವು C.L. Bible (BSI)

7 ಆ ಎರಡು ರತ್ನಗಳು ಇಸ್ರಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಎರಡು ರತ್ನಗಳು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಅವರು ಈ ರತ್ನಗಳನ್ನು ಏಫೋದಿನ ಭುಜದ ಪಟ್ಟಿಯಲ್ಲಿ ಇಟ್ಟರು. ಇಸ್ರೇಲರನ್ನು ದೇವರ ಜ್ಞಾಪಕಕ್ಕೆ ತರುವಂತೆ ಈ ರತ್ನಗಳು ಇಡಲ್ಪಟ್ಟವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:7
7 ತಿಳಿವುಗಳ ಹೋಲಿಕೆ  

‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.


ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.


“ದೈವನಿರ್ಣಯದ ಚೀಲವುಳ್ಳ ಆ ಫಲಕದ ಮೇಲೆ ಇಸ್ರಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಅದನ್ನು ತನ್ನ ಎದೆಯ ಮೇಲೆ ಧರಿಸಿಕೊಂಡು ಪವಿತ್ರಸ್ಥಾನದೊಳಗೆ ಬರುವಾಗಲೆಲ್ಲಾ ಆ ಹೆಸರುಗಳನ್ನು ಸರ್ವೇಶ್ವರನಾದ ನನ್ನ ನೆನಪಿಗೆ ಸತತವಾಗಿ ತರುವನು.


ಜಗತ್ತಿನಾದ್ಯಂತ ಎಲ್ಲೆಲ್ಲಿ ಶುಭಸಂದೇಶವನ್ನು ಪ್ರಕಟಿಸಲಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು, ಇದು ನಿಶ್ಚಯ,” ಎಂದರು.


ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.


ಈ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳಿರಬೇಕು. ಅದಕ್ಕೆ ಎರಡು ಕೊನೆಗಳು ಜೋಡಿಸಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು