Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:1 - ಕನ್ನಡ ಸತ್ಯವೇದವು C.L. Bible (BSI)

1 ಆಗ ಮೋಶೆ ಉತ್ತರ ನೀಡಿ,” ಆಲಿಸಬೇಕು; ಆ ಜನರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋಗಬಹುದು: ‘ಸರ್ವೇಶ್ವರ ಸ್ವಾಮಿ ನಿನಗೆ ಕಾಣಿಸಿಕೊಂಡಿದ್ದೇ ಇಲ್ಲ’ ಎಂದು ಹೇಳಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದಕ್ಕೆ ಮೋಶೆ - ಚಿತ್ತೈಸು; ಅವರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋದಾರು; ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲವೆಂದು ಹೇಳಾರು ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:1
14 ತಿಳಿವುಗಳ ಹೋಲಿಕೆ  

“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ಸ್ವಜನರ ಬಿಡುಗಡೆಗೆ ದೇವರು ತನ್ನನ್ನು ನೇಮಿಸಿರುವರು; ತನ್ನ ಸ್ವಂತಜನರು ಇದನ್ನು ಅರ್ಥಮಾಡಿಕೊಳ್ಳುವರು ಎಂದು ಮೋಶೆ ಭಾವಿಸಿದ್ದನು. ಆದರೆ, ಅವರು ಅರ್ಥಮಾಡಿಕೊಳ್ಳಲಿಲ್ಲ.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ಅದಕ್ಕೆ ಮೋಶೆ, “ಸ್ವಾಮೀ, ನಾನು ಮಾತಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಮೋಶೆಗೆ ಸರ್ವೇಶ್ವರ ಹೇಳಿದ ಮಾತುಗಳನ್ನೆಲ್ಲ ಆರೋನನು ಆ ಜನರಿಗೆ ತಿಳಿಸಿದನು. ಮೋಶೆ ಅವರ ಮುಂದೆ ಆ ಸೂಚಕಕಾರ್ಯಗಳನ್ನು ಮಾಡಿದನು. ಜನರು ನಂಬಿದರು.


ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು.


ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.


ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು