ವಿಮೋಚನಕಾಂಡ 4:10 - ಕನ್ನಡ ಸತ್ಯವೇದವು C.L. Bible (BSI)10 ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮೊದಲಿನಿಂದಲೂ ನೀನು ದಾಸನ ಸಂಗಡ ಮಾತಾಡಿದ ಮೇಲೆಯೂ ವಾಕ್ಚಾತುರ್ಯವಿಲ್ಲದವನು; ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಎಂದು ಹೇಳಲು ಯೆಹೋವನು ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು. ಅಧ್ಯಾಯವನ್ನು ನೋಡಿ |