ವಿಮೋಚನಕಾಂಡ 4:11 - ಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮನುಷ್ಯರಿಗೆ ಬಾಯಿ ಕೊಟ್ಟವರಾರು? ಒಬ್ಬನು ಮೂಕನಾಗಿ ಮತ್ತೊಬ್ಬನು ಕಿವುಡನಾಗಿ ಒಬ್ಬನು ಕಣ್ಣುಳ್ಳವನಾಗಿ ಮತ್ತೊಬ್ಬನು ಕಣ್ಣಿಲ್ಲದವನಾಗಿ ಇರಬೇಕೆಂದು ನೇವಿುಸಿದವರಾರು? ಯೆಹೋವನಾಗಿರುವ ನಾನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ? ಅಧ್ಯಾಯವನ್ನು ನೋಡಿ |