ವಿಮೋಚನಕಾಂಡ 4:14 - ಕನ್ನಡ ಸತ್ಯವೇದವು C.L. Bible (BSI)14 ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಅವನ ಮೇಲೆ ಕೋಪಗೊಂಡು - ನಿನ್ನ ಅಣ್ಣನಾಗಿರುವ ಲೇವಿಯನಾದ ಆರೋನನಿದ್ದಾನಲ್ಲಾ, ಅವನು ಚೆನ್ನಾಗಿ ಮಾತಾಡಬಲ್ಲವನೆಂದು ನನಗೆ ಗೊತ್ತದೆ; ಅವನೇ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ; ನಿನ್ನನ್ನು ಕಂಡು ಸಂತೋಷಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನು ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಮೋಶೆಯ ಮೇಲೆ ಬೇಸರಗೊಂಡು, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲನೆಂದು ನನಗೆ ಗೊತ್ತಿದೆ. ಅವನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ಕಂಡು, ತನ್ನ ಹೃದಯದಲ್ಲಿ ಆನಂದಿಸುವನು. ಅಧ್ಯಾಯವನ್ನು ನೋಡಿ |
ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”