Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:19 - ಕನ್ನಡ ಸತ್ಯವೇದವು C.L. Bible (BSI)

19 ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ವಿುದ್ಯಾನ್‍ದೇಶದಲ್ಲಿ ಯೆಹೋವನು ಮೋಶೆಗೆ - ನೀನು ಐಗುಪ್ತದೇಶಕ್ಕೆ ತಿರಿಗಿ ಹೋಗು; ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಮಿದ್ಯಾನಿನಲ್ಲಿ ಮೋಶೆಗೆ, “ಈಜಿಪ್ಟಿಗೆ ಹಿಂದಿರುಗಿ ಹೋಗು. ಏಕೆಂದರೆ ನಿನ್ನನ್ನು ಕೊಲ್ಲಬೇಕೆಂದಿದ್ದ ಜನರೆಲ್ಲಾ ಸತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:19
3 ತಿಳಿವುಗಳ ಹೋಲಿಕೆ  

“ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು