Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:20 - ಕನ್ನಡ ಸತ್ಯವೇದವು C.L. Bible (BSI)

20 ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಹತ್ತಿಸಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರೆದುಕೊಂಡು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಬಂದನು. ಇದಲ್ಲದೆ ದೇವರ ಕೋಲನ್ನು ಕೈಯಲ್ಲಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:20
10 ತಿಳಿವುಗಳ ಹೋಲಿಕೆ  

‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.


ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.


ಅದಕ್ಕೆ ಸರ್ವೇಶ್ವರ ಅವನನ್ನು, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು, ಅವನು, “ಇದು ಕೋಲು” ಎಂದನು.


ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ಇದನ್ನು ಕೇಳಿದ್ದೇ ಮೋಶೆ ಅಲ್ಲಿಂದ ಪಲಾಯನಮಾಡಿ ಮಿದ್ಯಾನರ ನಾಡಿನಲ್ಲಿ ಆಶ್ರಯ ಪಡೆದನು. ಅಲ್ಲಿರುವಾಗ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು.


ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


“ನಿನ್ನ ಮಾವನಾದ ನಾನು, ನಿನ್ನ ಹೆಂಡತಿ ಹಾಗು ನಿನ್ನ ಇಬ್ಬರು ಮಕ್ಕಳು ಬಂದಿದ್ದೇವೆ” ಎಂದು ಮೋಶೆಗೆ ಹೇಳಿ ಕಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು