Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:21
34 ತಿಳಿವುಗಳ ಹೋಲಿಕೆ  

ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯ ಕಲ್ಲಾಯಿತು, ಇಸ್ರಯೇಲರನ್ನು ಅವನು ಹೋಗಲು ಬಿಡಲಿಲ್ಲ.


ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಆದರೂ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣವಾಗಿಸಿದರು. ಅವನು ಇಸ್ರಯೇಲರನ್ನು ಹೋಗಲು ಬಿಡಲಿಲ್ಲ.


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II


‘ಹೇಗೆ ಪ್ರೇರಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು, ‘ನಾನು ಅಸತ್ಯವಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು,’ ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ, ‘ಹೋಗಿ ಅದರ ಅಂತೆಯೇ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವೆ,’ ಎಂದರು.


ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು.


ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.


ಆದರೂ ಫರೋಹನು ಮತ್ತೆ ತನ್ನ ಹೃದಯವನ್ನು ಮೊಂಡುಮಾಡಿಕೊಂಡು ಜನರಿಗೆ ಹೋಗಲು ಅಪ್ಪಣೆಕೊಡದೆ ಹೋದನು.


ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;


ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ.


ಸರ್ವೇಶ್ವರ ಮೋಶೆಗೆ, “ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ; ಆದ್ದರಿಂದ ಈಜಿಪ್ಟ್ ದೇಶದಲ್ಲಿ ಸೂಚಕಕಾರ್ಯಗಳನ್ನು ಹೆಚ್ಚಾಗಿ ನಡೆಸಲು ಆಸ್ಪದ ದೊರಕುವುದು,” ಎಂದು ಹೇಳಿದರು.


ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.


ಕಡೆಗಣಿಸಿದರು ಈಜಿಪ್ಟಿನಲಿ ಮಾಡಿದ ಪವಾಡಗಳನು I ಸೋನ್ ಬಯಲು ಸೀಮೆಯಲಾತ ಮಾಡಿದ ಮಹತ್ಕಾರ್ಯಗಳನು II


ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.


ಕಪ್ಪೆಗಳು ತಮ್ಮನ್ನೂ ತಮ್ಮ ಮನೆಮಾರುಗಳನ್ನೂ ತಮ್ಮ ಪ್ರಜಾಪರಿವಾರಗಳನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವುವು. ಇದರಿಂದ ನಮ್ಮ ದೇವರಾದ ಸರ್ವೇಶ್ವರನಿಗೆ ಸಮಾನರು ಯಾರೂ ಇಲ್ಲವೆಂದು ತಾವೇ ತಿಳಿದುಕೊಳ್ಳುವಿರಿ,” ಎಂದನು.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು