Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:24 - ಕನ್ನಡ ಸತ್ಯವೇದವು C.L. Bible (BSI)

24 ಈಜಿಪ್ಟಿಗೆ ಹೋಗುವ ದಾರಿಯಲ್ಲಿದ್ದ ಛತ್ರವೊಂದರಲ್ಲಿ ಸರ್ವೇಶ್ವರ ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೋಗುವ ದಾರಿಯಲ್ಲಿ ಮೋಶೆ ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮೋಶೆಯು ಈಜಿಪ್ಟಿಗೆ ತನ್ನ ಪ್ರಯಾಣವನ್ನು ಮುಂದುವರೆಸಿ ಛತ್ರವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ ವಸತಿಗೃಹದಲ್ಲಿದ್ದಾಗ, ಯೆಹೋವ ದೇವರು ಮೋಶೆಯ ಎದುರಿಗೆ ಬಂದು ಅವನನ್ನು ಕೊಲ್ಲುವುದಕ್ಕಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:24
8 ತಿಳಿವುಗಳ ಹೋಲಿಕೆ  

ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.


ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ರಾತ್ರಿಗೆ ಒಂದು ಚಾವಡಿಯಲ್ಲಿ ಇಳಿದುಕೊಂಡರು. ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಧಾನ್ಯಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದನು. ತಾನು ತಂದಿದ್ದ ಹಣ ಅದರ ಬಾಯಲ್ಲೇ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು