Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:27 - ಕನ್ನಡ ಸತ್ಯವೇದವು C.L. Bible (BSI)

27 ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದಲ್ಲದೆ ಯೆಹೋವನು ಆರೋನನಿಗೆ - ನೀನು ಮೋಶೆಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೊರಟುಹೋಗು ಎಂದು ಹೇಳಲಾಗಿ ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:27
15 ತಿಳಿವುಗಳ ಹೋಲಿಕೆ  

ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಸಿದ್ಧವಾಗಿ ಕೆಳಕ್ಕೆಹೋಗು. ನಾನೇ ಅವರನ್ನು ಕಳುಹಿಸಿರುವುದರಿಂದ ಸಂಕೋಚಪಡದೆ ಅವರೊಡನೆ ಹೋಗು,” ಎಂದರು.


ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಹೆಚ್ಚಿನ ಲಾಭ.


ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರ ಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು:


ಅನಂತರ ರಾಖೇಲಳಿಗೆ ಮುದ್ದಿಟ್ಟನು; ಸಂತೋಷ ಉಕ್ಕಿಬಂದು ಗಟ್ಟಿಯಾಗಿ ಅತ್ತನು.


ಕತ್ತರಿಸಿದ ಮುಂದೊಗಲನ್ನು ಅವನ ಪಾದಗಳಿಗೆ ಮುಟ್ಟಿಸಿದಳು. ಆಗ ಸರ್ವೇಶ್ವರ ಅವನನ್ನು ಉಳಿಸಿದರು. ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿದ್ದು.


ಮೋಶೆಯ ಮಾವ ಇತ್ರೋ, ಮೋಶೆಯ ಮಕ್ಕಳನ್ನೂ ಹೆಂಡತಿಯನ್ನೂ ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.


ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು