Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:31 - ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:31
27 ತಿಳಿವುಗಳ ಹೋಲಿಕೆ  

“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ಇದನ್ನು ಕೇಳಿದ ಆ ಮನುಷ್ಯ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದನು.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿದನು. ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.


ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.


ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ,


ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.


ಆ ಮೇಘಸ್ತಂಭ ಗುಡಾರದ ಬಾಗಿಲಲ್ಲಿ ನಿಲ್ಲುವುದನ್ನು ಜನರೆಲ್ಲರು ನೋಡಿ, ಎದ್ದುನಿಂತು ತಮ್ಮತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.


ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.


ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು