ವಿಮೋಚನಕಾಂಡ 4:6 - ಕನ್ನಡ ಸತ್ಯವೇದವು C.L. Bible (BSI)6 ಮತ್ತೆ ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ನಿನ್ನ ಉಡಿಗೆಯಲ್ಲಿ ಇಟ್ಟುಕೊ,” ಎಂದರು. ಅಂತೆಯೇ ಉಡಿಗೆಯಲ್ಲಿ ಇಟ್ಟು ಹೊರಗೆ ತೆಗೆದಾಗ ಅವನ ಕೈ ತೊನ್ನುಹತ್ತಿ ಹಿಮದಂತೆ ಬೆಳ್ಳಗಾಗಿ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮತ್ತೆ ಯೆಹೋವನು ಅವನಿಗೆ - ನಿನ್ನ ಕೈಯನ್ನು ಉಡಿಯಲ್ಲಿ ಇಟ್ಟುಕೋ ಎಂದು ಹೇಳಿದನು. ಅವನು ಉಡಿಯಲ್ಲಿ ಇಟ್ಟುಕೊಂಡು ಹೊರಗೆ ತೆಗೆಯಲು ಅದು ತೊನ್ನು ಹತ್ತಿ ಹಿಮದಂತೆ ಬೆಳ್ಳಗಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇನ್ನೂ ಮಾತನಾಡಿ, “ನಿನ್ನ ಕೈಯನ್ನು ನಿನ್ನ ಉಡಿಯಲ್ಲಿ ಇಟ್ಟುಕೋ,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆದನು. ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು. ಅಧ್ಯಾಯವನ್ನು ನೋಡಿ |