ವಿಮೋಚನಕಾಂಡ 4:7 - ಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನು ಅವನಿಗೆ - ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಸೇರಿಸು ಎಂದು ಹೇಳಿದನು. ಅವನು ಅದನ್ನು ತಿರಿಗಿ ಉಡಿಯಲ್ಲಿ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ಮೈಯಂತೆ ಆಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ದೇವರು, “ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಹಾಕು” ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು. ಅಧ್ಯಾಯವನ್ನು ನೋಡಿ |