Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೆಹೋವನು ಅವನಿಗೆ - ಅವರು ನಿನ್ನನ್ನು ನಂಬದೆ ಮೊದಲನೆಯ ಮಹತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯೆಹೋವ ದೇವರು, “ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ಹೋದರೂ, ಎರಡನೆಯ ಸೂಚಕಕಾರ್ಯವನ್ನು ನೋಡಿ ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:8
10 ತಿಳಿವುಗಳ ಹೋಲಿಕೆ  

ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ; ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ” ಎಂದು ಹರಟೆ ಕೊಚ್ಚಿಕೊಳ್ಳುತ್ತಾರೆ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.


ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.


ಆಗ ಮೋಶೆ, ಸರ್ವೇಶ್ವರ ಸ್ವಾಮಿ ತನ್ನನ್ನು ಕಳಿಸುವಾಗ ಯಾವ ಮಾತುಗಳನ್ನು ಹೇಳಿದರೋ ಏನೇನು ಸೂಚಕಕಾರ್ಯಗಳು ಮಾಡಬೇಕೆಂದು ಆಜ್ಞಾಪಿಸಿದರೋ ಅವುಗಳನ್ನೆಲ್ಲ ಆರೋನನಿಗೆ ತಿಳಿಸಿದನು.


ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು