ವಿಮೋಚನಕಾಂಡ 4:9 - ಕನ್ನಡ ಸತ್ಯವೇದವು C.L. Bible (BSI)9 ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಎರಡು ಮಹತ್ಕಾರ್ಯಗಳನ್ನೂ ಅವರು ಮನಸ್ಸಿಗೆ ತೆಗೆದುಕೊಳ್ಳದೆಯೂ ನಿನ್ನ ಮಾತನ್ನು ನಂಬದೆಯೂ ಹೋದರೆ, ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣಗಿದ ನೆಲದಲ್ಲಿ ಸುರಿಯಬೇಕು; ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಎರಡೂ ಸೂಚಕಕಾರ್ಯಗಳನ್ನು ಅವರು ನಂಬದೆ, ನಿನ್ನ ಮಾತನ್ನು ಕೇಳದೆ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದು, ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ನೀನು ತೆಗೆದ ನದಿಯ ನೀರು ಒಣಗಿದ ನೆಲದ ಮೇಲೆ ರಕ್ತವಾಗುವುದು,” ಎಂದರು. ಅಧ್ಯಾಯವನ್ನು ನೋಡಿ |