Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:13 - ಕನ್ನಡ ಸತ್ಯವೇದವು C.L. Bible (BSI)

13 ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಆ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಆ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನು ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆರೋನನು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ, ಅವನನ್ನು ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:13
13 ತಿಳಿವುಗಳ ಹೋಲಿಕೆ  

ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಅನಂತರ ಅವನ ಮಕ್ಕಳನ್ನು ಬರಮಾಡು.


ಇಸ್ರಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಸರ್ವೇಶ್ವರ ಅವರನ್ನು ಮೋಶೆಯ ಮುಖಾಂತರ ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ವಿಧಿಸಿದರು.”


ಅನಂತರ ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ಪೇಟಗಳನ್ನು ತೊಡಿಸಿದನು.


ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನ ಮಾಡಿ ಅವನನ್ನು ಅಭಿಷೇಕಿಸು.


ಸರ್ವೇಶ್ವರನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶಜರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳು. ಮೋಶೆ ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಯಾಜಕ ಸೇವಾವೃತ್ತಿಗಾಗಿ ಪ್ರತಿಷ್ಠಾಪಿಸಿದ ದಿನದಂದೇ ಇದು ನೇಮಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು