Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:20 - ಕನ್ನಡ ಸತ್ಯವೇದವು C.L. Bible (BSI)

20 ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:20
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.


ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.


ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿಡಬೇಕು.


ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು.


ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.


ಅದರಲ್ಲಿ ಎರಡು ಕಲ್ಲಿನ ಹಲಗೆಗಳು ಹೊರತಾಗಿ ಬೇರೇನೂ ಇರಲಿಲ್ಲ. ಈಜಿಪ್ಟ್ ದೇಶದಿಂದ ಬಂದ ಇಸ್ರಯೇಲರೊಡನೆ, ಹೋರೇಬ್‍ಬೆಟ್ಟದ ಬಳಿ, ಸರ್ವೇಶ್ವರ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಅವುಗಳನ್ನು ಅದರಲ್ಲಿಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು