Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:24 - ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ದೀಪವೃಕ್ಷವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣಕಡೆಯಲ್ಲಿ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಯೆಹೋವನು ಆಜ್ಞಾಪಿಸಿದಂತೆಯೇ ಅವನು ದೀಪಸ್ತಂಭವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣ ಕಡೆಯಲ್ಲಿ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:24
13 ತಿಳಿವುಗಳ ಹೋಲಿಕೆ  

ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II


ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪವೃಕ್ಷವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು.


ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.


ಅದರ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು.


ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು