Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:29 - ಕನ್ನಡ ಸತ್ಯವೇದವು C.L. Bible (BSI)

29 ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನು ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಲಿನ ಮುಂದೆ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:29
15 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರದ ಬಾಗಿಲಿನ ಮುಂದುಗಡೆಯಲ್ಲಿ ಬಲಿಪೀಠವನ್ನು ಇಡು.


ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ದೃಷ್ಟಿಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ?


ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ಅದರಲ್ಲಿ ನೀರು ತುಂಬಿಸಿದನು.


ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.


ಆಗ ಆ ಪುರುಷ ನನಗೆ ಹೀಗೆ ಹೇಳಿದನು: “ನರಪುತ್ರನೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ದಹನಬಲಿಗೂ, ರಕ್ತವೆರಚುವ ಸಂಸ್ಕಾರಕ್ಕೂ ಬಲಿಪೀಠವನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.


ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.


ಆಮೇಲೆ ಅವನು ಪ್ರಾಕಾರವನ್ನು ಅಳೆಯಲು ಅದು ಐವತ್ತು ಮೀಟರ್ ಉದ್ದವಾಗಿಯೂ ಐವತ್ತು ಮೀಟರ್ ಅಗಲವಾಗಿಯೂ ಚಚ್ಚೌಕವಾಗಿತ್ತು; ಬಲಿಪೀಠವು ದೇವಸ್ಥಾನದ ಮುಂದೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು