Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:30 - ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ಅದರಲ್ಲಿ ನೀರು ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಗಂಗಾಳವನ್ನು ಇರಿಸಿ ತೊಳಕೊಳ್ಳುವದಕ್ಕೋಸ್ಕರ ಅದರಲ್ಲಿ ನೀರು ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯ ಗಂಗಾಳವನ್ನು ಇಟ್ಟು, ಅದರಲ್ಲಿ ತೊಳೆಯುವುದಕ್ಕೆ ನೀರನ್ನು ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:30
7 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರು ತೊಟ್ಟಿಯನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆಮಾಡುತ್ತಿದ್ದ ಮಹಿಳೆಯರು ಕೊಟ್ಟ ತಾಮ್ರದ ದರ್ಪಣಗಳಿಂದ ನೀರಿನ ತೊಟ್ಟಿಯನ್ನೂ ಅದರ ಪೀಠವನ್ನೂ ಮಾಡಿದನು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು