Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:38 - ಕನ್ನಡ ಸತ್ಯವೇದವು C.L. Bible (BSI)

38 ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲುಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇಸ್ರಾಯೇಲ್ಯರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಏಕೆಂದರೆ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿ ಅವರ ಕಣ್ಣುಗಳ ಮುಂದೆ ಹಗಲಿನಲ್ಲಿ ಯೆಹೋವ ದೇವರ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:38
10 ತಿಳಿವುಗಳ ಹೋಲಿಕೆ  

ಹಗಲಲಿ ಕರೆದೊಯ್ದನು ಮೇಘದ ನೆರಳಲಿ I ಇರುಳೊಳು ನಡೆಸಿದನು ಜ್ವಾಲೆಯ ಬೆಳಕಲಿ II


ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.


ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.


ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II


ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಮಿಗಿಸಬಾರದು. ಅದರ ಒಂದು ಎಲುಬನ್ನಾದರೂ ಮುರಿಯಬಾರದು. ಪಾಸ್ಕ ಹಬ್ಬ ಕುರಿತ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.


ಹಗಲಿನಲ್ಲಿ ಮೇಘಸ್ತಂಭ, ರಾತ್ರಿಯಲ್ಲಿ ಅಗ್ನಿಸ್ತಂಭ ತಪ್ಪದೆ ಕಾಣಿಸುತ್ತಿದ್ದವು.


ಅದು ಸದಾ ಹಾಗೆಯೇ ಇರುತ್ತಿತ್ತು. ಆ ಮೇಘ ದೇವಸ್ಥಾನವನ್ನು ಆವರಿಸಿಕೊಳ್ಳುತ್ತಿತ್ತು; ರಾತ್ರಿವೇಳೆಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.


ಅವರು ಪಾಳೆಯದಿಂದ ಹೊರಡುವಾಗ ಹಗಲಲ್ಲಿ ಸರ್ವೇಶ್ವರನ ಮೇಘ ಅವರ ಮೇಲೆ ಇರುತ್ತಿತ್ತು.


ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು