Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:4 - ಕನ್ನಡ ಸತ್ಯವೇದವು C.L. Bible (BSI)

4 ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಮೇಜನ್ನು ತರಿಸಿ ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿ ಇಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೇಜನ್ನು ಒಳಗೆ ತಂದು, ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪಸ್ತಂಭವನ್ನು ಒಳಗೆ ತಂದು, ನೀನು ಅದರ ದೀಪಗಳನ್ನು ಅಂಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:4
7 ತಿಳಿವುಗಳ ಹೋಲಿಕೆ  

ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


“ಆ ದೀಪವು ಯಾವಾಗಲೂ ಉರಿಯುತ್ತಿರಬೇಕು. ಅದಕ್ಕೆ ಎಣ್ಣೇ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಇಸ್ರಯೇಲರಿಗೆ ಅಪ್ಪಣೆ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು