Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:9 - ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:9
16 ತಿಳಿವುಗಳ ಹೋಲಿಕೆ  

ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ತಾಮ್ರದ ಬಲಿಪೀಠ, ಅದರ ತಾಮ್ರದ ಜಾಳಿಗೆ, ಅದರ ನೀರಿನ ತೊಟ್ಟಿ, ಅದರ ಪೀಠ ಇವುಗಳನ್ನೂ;


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.


ಅಂತೆಯೇ ಗುಡಾರದ ಮೇಲೂ ದೇವಾರಾಧನೆಗೆ ಬೇಕಾದ ಎಲ್ಲಾ ಪೂಜಾಸಾಮಗ್ರಿಗಳ ಮೇಲೂ ಆ ರಕ್ತವನ್ನು ಚಿಮುಕಿಸಿದನು.


ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ತೂಗುಬಿಡು.


ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು