ವಿಮೋಚನಕಾಂಡ 5:1 - ಕನ್ನಡ ಸತ್ಯವೇದವು C.L. Bible (BSI)1 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿ |