ವಿಮೋಚನಕಾಂಡ 5:13 - ಕನ್ನಡ ಸತ್ಯವೇದವು C.L. Bible (BSI)13 ಮೇಲ್ವಿಚಾರಕರು, “ನಿಮಗೆ ಹುಲ್ಲಿದ್ದ ಕಾಲದಲ್ಲಿ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಆಯಾ ದಿನದಲ್ಲಿ ಮುಗಿಸಬೇಕು" ಎಂದು ಹೇಳಿ ಅವಸರಪಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, “ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು” ಎಂದು ಹೇಳಿ ಅವರನ್ನು ಅವಸರ ಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬಿಟ್ಟೀಮಾಡಿಸುವವರು - ನಿಮಗೆ ಹುಲ್ಲಿದ್ದ ಕಾಲದಲ್ಲಿ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಆಯಾ ದಿನದಲ್ಲೇ ಮುಗಿಸಬೇಕೆಂದು ಹೇಳಿ ಅವರನ್ನು ತ್ವರೆಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು, ಜನರಿಂದ ಕಷ್ಟಕರವಾದ ಕೆಲಸಗಳನ್ನು ಬಲವಂತದಿಂದ ಮಾಡಿಸುತ್ತಲೇ ಇದ್ದರು. ಮೊದಲು ಅವರಿಗೆ ಹುಲ್ಲನ್ನು ಕೊಟ್ಟಿದ್ದಾಗ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಬಲವಂತದಿಂದ ಮಾಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು. ಅಧ್ಯಾಯವನ್ನು ನೋಡಿ |