ವಿಮೋಚನಕಾಂಡ 5:14 - ಕನ್ನಡ ಸತ್ಯವೇದವು C.L. Bible (BSI)14 “ನೀವು ಇಟ್ಟಿಗೆಗಳ ಲೆಕ್ಕವನ್ನು ಹಿಂದೆ ಒಪ್ಪಿಸುತ್ತಿದ್ದಂತೆ ನಿನ್ನೆ ಮತ್ತು ಇಂದು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಫರೋಹನ ಅಧಿಕಾರಿಗಳು ತಾವೇ ನೇಮಿಸಿದ್ದ ಇಸ್ರಯೇಲ್ ಮೇಸ್ತ್ರಿಗಳನ್ನು ಹೊಡೆಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಫರೋಹನ ಅಧಿಕಾರಿಗಳು ತಾವೇ ನೇವಿುಸಿದ ಇಸ್ರಾಯೇಲ್ ಮೇಸ್ತ್ರಿಗಳಿಗೆ - ನೀವು ಮುಂಚೆ ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈಜಿಪ್ಟಿನ ಈ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಆರಿಸಿ ಜನರು ಮಾಡಿದ ಕೆಲಸಕ್ಕೆ ಅವರನ್ನು ಜವಾಬ್ದಾರರನ್ನಾಗಿ ಮಾಡಿದರು. ಈಜಿಪ್ಟಿನ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಹೊಡೆದು, “ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಯಾಕೆ ಮಾಡುತ್ತಿಲ್ಲ? ಹಿಂದೆ ನೀವು ಮಾಡಲು ಸಾಧ್ಯವಾಗಿದ್ದರೆ, ಈಗಲೂ ನೀವು ಮಾಡಬಹುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಅವರನ್ನು ಹೊಡೆಸಿದರು. ಅಧ್ಯಾಯವನ್ನು ನೋಡಿ |