Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:2 - ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:2
25 ತಿಳಿವುಗಳ ಹೋಲಿಕೆ  

ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.


‘ಈ ಸರ್ವಶಕ್ತ ಎಷ್ಟರವನು : ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ.


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II


“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.


ನೀವು ಹಿಜ್ಕೀಯನಿಂದ ಮರುಳಾಗಿ ಮೋಸಹೋಗಬೇಡಿ; ಅವನನ್ನು ನಂಬಲೂಬೇಡಿ. ಯಾವ ರಾಜ್ಯಜನಾಂಗಗಳ ದೇವತೆಯೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆಹೋದರು. ಅಂದ ಮೇಲೆ, ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?".


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.


ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.


ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ರಾಜ್ಯಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿರುತ್ತಾನೋ?


ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.


“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡದೆ ‘ನಾವು ಈ ನಾಡಿನಲ್ಲಿ ನೆಲೆಸುವುದೇ ಇಲ್ಲ, ಇದು ನಮಗೆ ಬೇಡವೇಬೇಡ.


“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ?


ಗಟ್ಟಿಮುಟ್ಟಾದ ಗುರಾಣಿಯನ್ನು ಹಿಡಿದುಕೊಂಡೇ ಆತನ ಮೇಲೆ ಬೀಳಲು ತಲೆ ನಿಮಿರಿ ಓಡಿದನಲ್ಲವೆ?


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು