Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:21 - ಕನ್ನಡ ಸತ್ಯವೇದವು C.L. Bible (BSI)

21 ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಮಗೆ ಹೋಗಲು ಅಪ್ಪಣೆಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:21
19 ತಿಳಿವುಗಳ ಹೋಲಿಕೆ  

ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.


ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.


ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.


ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.


“ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”


ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.


ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ?


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಫರೋಹನ ಬಳಿಯಿಂದ ಹಿಂದಿರುಗಿದಾಗ ಅವರನ್ನು ಎದುರುಗೊಳ್ಳಲು ಮೋಶೆ ಮತ್ತು ಆರೋನರು ಕಾದಿದ್ದರು .


“ನಾವೇನು ಕುಡಿಯಬೇಕು?” ಎಂದು ಜನರು ಮೋಶೆಯ ಮೇಲೆ ಗೊಣಗುಟ್ಟ ತೊಡಗಿದರು.


ಮರುಭೂಮಿಯಲ್ಲಿ ಇಸ್ರಯೇಲರ ಸಮಾಜವೆಲ್ಲ ಮೋಶೆ ಮತ್ತು ಆರೋನರ ವಿರುದ್ಧ ಗೊಣಗುಟ್ಟಿತು.


ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು