ವಿಮೋಚನಕಾಂಡ 5:3 - ಕನ್ನಡ ಸತ್ಯವೇದವು C.L. Bible (BSI)3 ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು. ಅಧ್ಯಾಯವನ್ನು ನೋಡಿ |