Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:1 - ಕನ್ನಡ ಸತ್ಯವೇದವು C.L. Bible (BSI)

1 ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:1
27 ತಿಳಿವುಗಳ ಹೋಲಿಕೆ  

ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.


ಭುಜಬಲದಿಂದ ಕೈಚಾಚಿ ಅವರನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಈಜಿಪ್ಟ್ ದೇಶದಿಂದ ಅವರು ತಂದಿದ್ದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಲ್ಲಿಂದ ಅವರನ್ನು ಹೊರಡಿಸಿದಾಗ ಸ್ವಲ್ಪವೂ ಸಮಯ ಸಿಕ್ಕದೆ ಕಣಕದಲ್ಲಿ ಹುಳಿಯನ್ನು ಕಲಸಲಿಕ್ಕೂ ಆಗಲಿಲ್ಲ ಹಾಗು ಬೇರೆ ಆಹಾರವನ್ನು ಸಿದ್ಧಪಡಿಸಿಕೊಳ್ಳಲೂ ಸಾಧ್ಯವಾಗಿರಲಿಲ್ಲ.


ಫರೋಹನು ಆ ರಾತ್ರಿಯಲ್ಲೆ ಮೋಶೆ ಮತ್ತು ಆರೋನರನ್ನು ಕರೆಯಿಸಿದನು. “ನೀವೂ ಹಾಗು ಇಸ್ರಯೇಲರೆಲ್ಲರೂ ನನ್ನ ಜನರನ್ನು ಬಿಟ್ಟು ಹೊರಟುಹೋಗಿ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು.


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಆ ಸರದಾರನು, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದದ್ದರಿಂದ ದೈವಪುರುಷನು ಅವನಿಗೆ, “ನೀನು ಅದನ್ನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ನುಡಿದಿದ್ದನು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು