Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:23 - ಕನ್ನಡ ಸತ್ಯವೇದವು C.L. Bible (BSI)

23 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆದ ಎಲೀಶೇಬಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:23
19 ತಿಳಿವುಗಳ ಹೋಲಿಕೆ  

“ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.


ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.


ರಾಮನಿಂದ ಜೆಸ್ಸೆವರೆಗಿನ ವಂಶಜರು: ಅಮ್ಮೀನಾದಾಬ್, ಯೆಹೂದ ಗೋತ್ರದ ಪ್ರಮುಖ ವ್ಯಕ್ತಿಯಾದ ನಹಶೋನ,


ಯೆಹೂದ ಕುಲದಿಂದ ಅಮ್ಮೀನಾದಾಬನ ಮಗ ನಹಶೋನ್


ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್,


ಅವನನ್ನೂ ಅವನ ಮಗ ಎಲ್ಲಾಜಾರನನ್ನೂ ಕರೆದುಕೊಂಡು ನೀನು ಹೋರ್ ಬೆಟ್ಟವನ್ನು ಹತ್ತು.


ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.


ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್‍. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.


ಮೋಶೆ ಆರೋನನಿಗೂ ಅವನ ಉಳಿದ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಅವರಿಗೆ ಹೀಗೆಂದು ಹೇಳಿದನು: “ಸರ್ವೇಶ್ವರನಿಗೆ ದಹನ ಬಲಿದಾನವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಮಿಕ್ಕಿರುವ ನೈವೇದ್ಯ ದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಬಲಿಪೀಠದ ಬಳಿಯಲ್ಲಿ ಊಟಮಾಡಿ.


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.


ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ಬಳಿಕ ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.


ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು