Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:26 - ಕನ್ನಡ ಸತ್ಯವೇದವು C.L. Bible (BSI)

26 “ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತ ದೇಶದಿಂದ ನಡಿಸಿಕೊಂಡು ಬರುವದಕ್ಕೆ ಯೆಹೋವನಿಂದ ಆಜ್ಞೆಹೊಂದಿದ ಆರೋನ ಮೋಶೆಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:26
23 ತಿಳಿವುಗಳ ಹೋಲಿಕೆ  

ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಯೇಲರ ಬಳಿಗೂ ಅರಸ ಫರೋಹನ ಬಳಿಗೂ ಕಳಿಸಿದರು.


ಮೋಶೆ ಮತ್ತು ಆರೋನರ ಮುಂದಾಳತ್ವದಲ್ಲಿ ಈಜಿಪ್ಟ್ ದೇಶದಿಂದ ಸೈನ್ಯ ಸೈನ್ಯವಾಗಿ ಹೊರಟ ಇಸ್ರಯೇಲರ ಪಯಣದ ವಿವರ:


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.


ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ಆಗ ಸಮುವೇಲನು, “ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತರುವುದಕ್ಕಾಗಿ ಮೋಶೆ ಹಾಗು ಆರೋನರನ್ನು ನೇಮಿಸಿದ ಸರ್ವೇಶ್ವರಸ್ವಾಮಿಯೇ ಇದಕ್ಕೆ ಸಾಕ್ಷಿ: ಇಲ್ಲಿ ನಿಂತುಕೊಳ್ಳಿರಿ:


ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ಇತ್ತ ಸರ್ವೇಶ್ವರ ಮೋಶೆಗೆ, “ನೀನು ಕೂಡಲೆ ಬೆಟ್ಟದಿಂದ ಇಳಿದುಹೋಗು, ಈಜಿಪ್ಟಿನಿಂದ ನೀನು ಕರೆದುತಂದ ನಿನ್ನ ಜನರು ಕೆಟ್ಟುಹೋದರು.


‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.


ಅಮ್ರಾಮನು ತನ್ನ ಸೋದರತ್ತೆಯಾದ ಯೋಕಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನು ಮತ್ತು ಮೋಶೆಯನ್ನು ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದ್ದನು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು