Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:4 - ಕನ್ನಡ ಸತ್ಯವೇದವು C.L. Bible (BSI)

4 ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:4
21 ತಿಳಿವುಗಳ ಹೋಲಿಕೆ  

ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕೆ ಅಲೆಯುತ್ತಿರಲು II


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ಮನೆಯಲ್ಲಿ ಹುಟ್ಟಿದವನೇ ಆಗಿರಲಿ, ಕ್ರಯಕ್ಕೆ ಕೊಂಡುಕೊಂಡವನೇ ಆಗಿರಲಿ, ಪ್ರತಿ ಒಬ್ಬನಿಗೂ ತಪ್ಪದೆ ಸುನ್ನತಿಯಾಗಬೇಕು. ನಾನು ಮಾಡುವ ಒಡಂಬಡಿಕೆಯ ಗುರುತು ಹೀಗೆ ನಿಮ್ಮ ದೇಹದಲ್ಲಿ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.


ದೇವರು ಅವನಿಗೆ, “ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲಪುರುಷನಾಗುವೆ.


ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


ಆದರೆ ನಿನ್ನೊಡನೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ನೀನು ಹೆಂಡತಿ, ಮಕ್ಕಳು ಹಾಗೂ ಸೊಸೆಯರ ಸಮೇತ ನಾವೆಯನ್ನು ಹತ್ತಬೇಕು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ಚೈತ್ರಮಾಸದ ಈ ದಿನದಂದು ನೀವು ಹೊರಟವರು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


“ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದು ಅದು ನಿಮ್ಮ ಸಂತತಿಗೆ” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು