Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:7
50 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ, ‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’


ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು : I “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು I ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು II


ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು.


ಮೋಶೆ ಮತ್ತು ಆರೋನರು ಇಸ್ರಯೇಲರೆಲ್ಲರನ್ನು ಉದ್ದೇಶಿಸಿ, “ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವರು ಸರ್ವೇಶ್ವರ ಸ್ವಾಮಿಯೇ ಎಂಬುದು ಈ ಸಂಜೆ ನಿಮಗೆ ಗೊತ್ತಾಗುವುದು.


ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು.


ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಗೊಂಡು ನಡೆಯಿರಿ.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ನಿಮ್ಮ ದೇವರಾಗಬೇಕೆಂಬ ಉದ್ದೇಶದಿಂದಲೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಸರ್ವೇಶ್ವರನಾದ ದೇವರು ನಾನು. ನಾನೇ ನಿಮ್ಮ ದೇವರಾದ ಸರ್ವೇಶ್ವರ.‘


ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.


ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು