Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:8 - ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:8
29 ತಿಳಿವುಗಳ ಹೋಲಿಕೆ  

ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ನಾಡನ್ನು ಕೊಟ್ಟೆನೋ ಆ ಇಸ್ರಾಯೇಲ್ ನಾಡಿಗೆ ನಿಮ್ಮನ್ನು ಬರಮಾಡುವಾಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ನಾಡನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸಿರಿ; ಇದು ನಿಮಗೆ ಸೊತ್ತಾಗಿಯೇ ಇರುವುದು.


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ನಾನು ಅಬ್ರಹಾಮ್, ಇಸಾಕರಿಗೆ ವಾಗ್ಡಾನ ಮಾಡಿದ ನಾಡನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು,” ಎಂದು ಹೇಳಿದರು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು.


ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ದೇವರು ಮೋಶೆಯ ಸಂಗಡ ಮಾತಾಡಿ ಇಂತೆಂದರು:


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


ನೀವು ಕೃಷಿಮಾಡದ, ಬೆಳೆ ತುಂಬಿದ ಭೂಮಿಯನ್ನು ನಿಮಗೆ ಕೊಟ್ಟೆ, ನೀವು ಕಟ್ಟದ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿ ಹಾಗೂ ಎಣ್ಣೆಮರಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ’.


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.


ನಿಮ್ಮ ದಯೆಗೆ ನಾನು ಅಯೋಗ್ಯನಾದೆನೇ? ‘ಮೊಲೆ ಕೂಸನ್ನು ಎತ್ತಿಕೊಂಡು ಹೋಗುವವಳಂತೆ ಈ ಜನರನ್ನು ತೋಳತೆಕ್ಕೆಯಲ್ಲಿರಿಸಿ, ಅವರ ಪೂರ್ವಜರಿಗೆ ನಾನು ಪ್ರಮಾಣಮಾಡಿದ ನಾಡಿಗೆ ಒಯ್ಯಿ’ ಎಂದು ಹೇಳುತ್ತೀರಲ್ಲವೆ? ನಾನು ಇವರಿಗೆ ಹೆತ್ತ ತಾಯಿಯೋ?


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು