Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:11 - ಕನ್ನಡ ಸತ್ಯವೇದವು C.L. Bible (BSI)

11 ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರಿಸಿದಾಗ ಆ ಜೋಯಿಸರೂ ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ರಾಜನು ತನ್ನ ವಿಧ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:11
25 ತಿಳಿವುಗಳ ಹೋಲಿಕೆ  

ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಮಾಟಗಾರರು ತಮ್ಮ ತಂತ್ರ ಮಂತ್ರಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡಲು ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ. ಆ ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿದ್ದವು.


ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಹಾಗೆಯೇ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.


ಆ ಅಧರ್ಮಿ ಸೈತಾನನ ಶಕ್ತಿಯೊಂದಿಗೆ ಬರುವನು. ಮೋಸಗೊಳಿಸುವ ಎಲ್ಲಾ ಬಗೆಯ ಪವಾಡಗಳನ್ನು, ಚಮತ್ಕಾರಗಳನ್ನು ಮತ್ತು ಶಕ್ತಿಯುತ ಕಾರ್ಯಗಳನ್ನು ಮಾಡಿತೋರಿಸುವನು.


ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ದುರ್ಮತಿಗಳೂ ವಿಶ್ವಾಸಭ್ರಷ್ಟರೂ ಆಗಿದ್ದಾರೆ. ಆದರೆ ಅವರ ಮೂರ್ಖತನ ದೀರ್ಘಕಾಲ ಬಾಳದು. ಯನ್ನ ಮತ್ತು ಯಂಬ್ರಳ ದೋಷದಂತೆ ಅದು ಸರ್ವರಿಗೂ ಬಟ್ಟಬಯಲಾಗುತ್ತದೆ.


ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಬಿಸಾಡಿದರು. ಅವೂ ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.


ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.


ಆದ್ದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಬೇಕೆಂದು ಬಾಬಿಲೋನಿನ ವಿದ್ವಾಂಸರೆಲ್ಲರನ್ನು ಕರೆದುತರಬೇಕೆಂದು ಆಜ್ಞಾಪಿಸಿದೆ.


ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು