Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:16 - ಕನ್ನಡ ಸತ್ಯವೇದವು C.L. Bible (BSI)

16 ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:16
18 ತಿಳಿವುಗಳ ಹೋಲಿಕೆ  

“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ಅನಂತರ ಸರ್ವೇಶ್ವರ, ಮೋಶೆಗೆ ಹೇಳಿದ್ದೇನೆಂದರೆ: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು: ‘ಹಿಬ್ರಿಯರ ದೇವರಾದ ಸರ್ವೇಶ್ವರನು ತನ್ನನ್ನು ಆರಾಧಿಸಲು ತನ್ನ ಜನರಿಗೆ ನಿಮ್ಮಿಂದ ಹೋಗಲು ಅಪ್ಪಣೆಯಾಗಬೇಕೆಂದು ಹೇಳಿದ್ದರು.


ಬಳಿಕ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಹೋಗಿ ಫರೋಹನ ಮುಂದೆ ನಿಂತುಕೊಂಡು ಹೀಗೆನ್ನಬೇಕು: ‘ಹಿಬ್ರಿಯರ ದೇವರಾದ ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡಬೇಕು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಸರ್ವೇಶ್ವರ ಈಜಿಪ್ಟಿನಲ್ಲಿದ್ದ ಚೊಚ್ಚಲು ಮಕ್ಕಳನ್ನು ಹಾಗು ಪಶುಪ್ರಾಣಿಗಳ ಚೊಚ್ಚಲು ಮರಿಗಳನ್ನೂ ಅಂತೂ ಈ ದೇಶದಲ್ಲಿ ಚೊಚ್ಚಲಾಗಿದ್ದುದೆಲ್ಲವನ್ನು ಸಂಹಾರ ಮಾಡಿದರು. ಆದಕಾರಣ ಗಂಡಾದ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಸರ್ವೇಶ್ವರನಿಗೆ ಸಮರ್ಪಿಸುತ್ತೇವೆ. ಮನುಷ್ಯರಿಗೆ ಹುಟ್ಟಿದ ಪ್ರಥಮ ಗರ್ಭಫಲವನ್ನಾದರೋ ಬದಲು ಕೊಟ್ಟು ಬಿಡಿಸಿಕೊಳ್ಳುತ್ತೇವೆ,” ಎಂದು ಹೇಳಬೇಕು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.


ತರುವಾಯ ಸರ್ವೇಶ್ವರ ಸ್ವಾಮಿ ಮೋಶೆಗೆ ಇಂತೆಂದರು: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು - ‘ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಹೋಗಲು ಅಪ್ಪಣೆ ಕೊಡು.


ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.


ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು